ಬೆಂಗಳೂರು: ರಾಜ್ಯದ ಗಡಿ ದಾಟಿ ಟ್ರಾಲಿ ಬ್ಯಾಗ್‌ಗಳಲ್ಲಿ ಶ್ರೀಗಂಧ ಕಳ್ಳಸಾಗಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕೇರಳ ಮೂಲದ ಅಬ್ದುಲ್ ರೆಹಮಾನ್, ಮೊಹಮದ್ ಶಾನ್, ವಿನು ಅಂತೋಣಿ ಹಾಗೂ ಜಾಫರ್ ಎಂಬ ನಾಲ್ವರನ್ನು ಬಂಧಿಸಿ, 82 ಕೆಜಿ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಚೆಕ್‌ಪೋಸ್ಟ್‌ಗಳಲ್ಲಿ ಅನುಮಾನ ಬಾರದಂತೆ ಪ್ರವಾಸಿಗರಂತೆ ಬಸ್‌ನಲ್ಲಿ ಪ್ರಯಾಣಿಸಿ, ಟ್ರಾಲಿ ಬ್ಯಾಗ್‌ಗಳಲ್ಲಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದರು. ಬಳಿಕ ಬೆಂಗಳೂರಿನಲ್ಲಿ ತಮ್ಮ ಕಾಯಂ ಗ್ರಾಹಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಂಚು ರೂಪಿಸಿದ್ದರು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹20.9 ಲಕ್ಷ ಮೌಲ್ಯದ ಶ್ರೀಗಂಧದ ತುಂಡುಗಳು, ಎರಡು ಕಾರುಗಳು ಹಾಗೂ ಐದು ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಇತರ ಆರೋಪಿಗಳ ಪತ್ತೆಗೆ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

