Breaking News

ಜಿಪ್‌ಲೈನ್ ದುರಂತ : ರೆಸಾರ್ಟ್ ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ದಾಂಡೇಲಿ : ತಾಲೂಕಿನ ಕೋಗಿಲಬನ – ಬಡಕಾನಶಿರಡಾ ಗ್ರಾ.ಪಂ ವ್ಯಾಪ್ತಿಯ ಬಡಕಾನಶಿರಡಾದಲ್ಲಿರುವ ಸ್ಟಾರ್ಲಿಂಗ್ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಅಪಘಾತದಲ್ಲಿ ಪ್ರವಾಸಿಗರೊಬ್ಬರು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕ ಸೇರಿದಂತೆ ಮೂವರ ವಿರುದ್ಧ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ಜುಲೈ 3ರಂದು ನಡೆದ ಈ ಘಟನೆಯಲ್ಲಿ ಕುಬೇರ ಸುರುಪುರ (40) ಎಂಬ ಪ್ರವಾಸಿಗ ಜಿಪ್‌ಲೈನ್ ಚಟುವಟಿಕೆಯಲ್ಲಿ ಭಾಗವಹಿಸಿದ್ದ ವೇಳೆ ಸುರಕ್ಷತಾ ಬೆಲ್ಟ್ (ಹಾರ್ನೆಸ್) ತುಂಡಾಗಿ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಇದೀಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ರೆಸಾರ್ಟ ಮಾಲೀಕ ಉಸ್ಮಾನ್ ವಹಾಬ್, ಸಿಬ್ಬಂದಿಗಳಾದ ರಾಘವೇಂದ್ರ, ಪವನ್ ಮೇಲೆಬಿ.ಎನ್.ಎಸ್ ಕಲಂ‌289 ,125(B) ,ಸಹಿತ 3(5) ಬಿ.ಎನ್.ಎಸ್ 2023 ,ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *