ಮೈಸೂರು: ಜಿಲ್ಲೆಯ ಹುಣಸೂರಿನ ನ್ಯೂ ಮಾರುತಿ ಬಡಾವಣೆಯಲ್ಲಿ ವ್ಯಕ್ತಿಯೊಬ್ಬ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು ನಿಶ್ಚಿತಾ (36), ನೆಕ್ಸಾ (13) ಮತ್ತು ರಕ್ಷಾ (6) ಎಂದು ಗುರುತಿಸಲಾಗಿದ್ದು, ಹರೀಶ್ (40) ಕೃತ್ಯ ಎಸಗಿದ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ, ಹರೀಶ್ ತನ್ನ ತಾಯಿಯನ್ನು ಕೆಲವು ದಿನಗಳ ಹಿಂದೆ ಸಂಬಂಧಿಕರ ಮನೆಗೆ ಕಳುಹಿಸಿದ್ದ. ಬಳಿಕ ಪತ್ನಿ ಮತ್ತು ಮಕ್ಕಳ ಬಾಯಿ-ಮೂಗಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ನಂತರ ಮನೆಯಲ್ಲೇ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಘಟನಾ ಸ್ಥಳದಲ್ಲಿ ಒಂದು ನೋಟ್ ಪತ್ತೆಯಾಗಿದ್ದು, ಅದರ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೌಟುಂಬಿಕ ಕಲಹ ಅಥವಾ ಆರ್ಥಿಕ ಸಂಕಷ್ಟ ಈ ಕೃತ್ಯಕ್ಕೆ ಕಾರಣವೇ ಎಂಬ ಬಗ್ಗೆ ಪರಿಶೀಲನೆ ಮುಂದುವರಿದಿದ್ದು, ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

