ಬೆಂಗಳೂರು: ದೇವನಹಳ್ಳಿಯಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಡಿ ಮಹಿಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನಕ್ಕೆ ಕರೆದುಕೊಂಡು ಹೋಗುವ ನೆಪದಲ್ಲಿ ಬಾಲಕಿಯನ್ನು ಮನೆಯಿಂದ ಹೊರಗೆ ಕರೆತಂದು, ಬಳಿಕ ಇಬ್ಬರು ಆರೋಪಿಗಳು ಆಕೆಯನ್ನು ಬೇರೆ ಸ್ಥಳಕ್ಕೆ ಕರೆದೊಯ್ದು ಬಲವಂತವಾಗಿ ಮದ್ಯ ಕುಡಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಮರುದಿನ ಬೆಳಗ್ಗೆ ಬಾಲಕಿಯನ್ನು ಮನೆಯ ಬಳಿ ಬಿಟ್ಟು, ವಿಷಯ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಮನೆಗೆ ಮರಳಿದ ಬಳಿಕ ಬಾಲಕಿ ನಡೆದ ಘಟನೆ ಕುರಿತು ಕುಟುಂಬಕ್ಕೆ ಮಾಹಿತಿ ನೀಡಿದ್ದು, ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬಾಲಕಿಯ ಹೇಳಿಕೆ ಆಧರಿಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

