ಇಂಡಿ (ವಿಜಯಪುರ): ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ಮಂಗಳವಾರ (ಜು.21) ನಡೆದಿದೆ. ತಾಲೂಕಿನ ಮಾವಿನಹಳ್ಳಿ ಗ್ರಾಮದ ಬಾಲಕ ಅಭಿಜಿತ ಭೀಮಪ್ಪಾ ಸಮಗಾರ (16) ಎಂಬಾತಬೇ ನೇಣು ಸಾವಿಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಇಂಡಿ ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ವಸತಿ ನಿಲಯದಲ್ಲಿ ಈ ದುರ್ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯು ಸ್ಥಳೀಯ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪ್ರಥಮ ಪಿಯು ಓದುತ್ತಿದ್ದ. ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಂದೆ, ತಾಯಿ ಮತ್ತು ಅಣ್ಣಂದಿರರಿಗೆ ಫೋನ್ ಮೂಲಕ ಮೆಸೇಜ್ ಹಾಕಿದ್ದ. ಅಲ್ಲದೇ, ಡೆತ್ ನೋಟ್ ಸಹ ಬರೆದು ಇಟ್ಟಿದ್ದಾನೆ ಎಂದು ತಿಳಿದು ಬಂದಿದೆ.ಆದರೆ, ವಿದ್ಯಾರ್ಥಿಯ ಈ ನಿರ್ಧಾರಕ್ಕೆ ನಿಖರ ಗೊತ್ತಾಗಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

