Breaking News

ಬೆಂಗಳೂರಲ್ಲಿ ಖೋಟಾ ನೋಟು ಜಾಲ ಪತ್ತೆ: ಇಬ್ಬರ ಸೆರೆ

ಬೆಂಗಳೂರು: ಖೋಟಾ ₹500 ನೋಟುಗಳನ್ನು ತಯಾರಿಸಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ಕುಂಬಳಗೋಡು ಠಾಣೆ ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 338 ಖೋಟಾ ನೋಟುಗಳು, ಜೆರಾಕ್ಸ್ ಯಂತ್ರ, ಲ್ಯಾಪ್‌ಟಾಪ್‌, ಕಾರು ಹಾಗೂ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರ ಪ್ರಕಾರ, ಮೈಸೂರು ಮೂಲದ ಆರೋಪಿ ಖೋಟಾ ನೋಟುಗಳನ್ನು ತಯಾರಿಸಿ ತಮಿಳುನಾಡಿನ ಸಹಚರನಿಗೆ ಕಳುಹಿಸುತ್ತಿದ್ದ. ಆತ ಅವುಗಳನ್ನು ಚಲಾವಣೆ ಮಾಡುತ್ತಿದ್ದ ಎನ್ನಲಾಗಿದೆ. ಸಾರ್ವಜನಿಕರು ₹500 ನೋಟುಗಳನ್ನು ಸ್ವೀಕರಿಸುವಾಗ ಸುರಕ್ಷತಾ ಚಿಹ್ನೆಗಳನ್ನು ಪರಿಶೀಲಿಸಿ, ಅನುಮಾನಾಸ್ಪದ ನೋಟು ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ಹೊರರಾಜ್ಯದಿಂದ ಅಕ್ರಮವಾಗಿ ಪಿಸ್ತೂಲ್‌ ಮತ್ತು ಜೀವಂತ ಗುಂಡುಗಳನ್ನು ನಗರಕ್ಕೆ ಪೂರೈಸುತ್ತಿದ್ದ ಆರೋಪಿಯನ್ನು ಸಿಸಿಬಿ ಬಂಧಿಸಿದೆ. ಆರೋಪಿಯಿಂದ ಒಂದು ಪಿಸ್ತೂಲ್‌ ಹಾಗೂ ನಾಲ್ಕು ಜೀವಂತ ಗುಂಡುಗಳನ್ನು ಜಪ್ತಿ ಮಾಡಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *