Breaking News

ಬೆಂಗಳೂರಲ್ಲಿ ಸೂಟ್​ಕೇಸ್​ನಲ್ಲಿ​ ಶವ ಪತ್ತೆ! ಕೆರೆಯಲ್ಲಿ ತೇಲಿ ಬಂದ ಮಹಿಳೆಯ ಮೃತದೇಹ

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದೆ. ಕೊಲೆ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಿರುವಾಗಲೇ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ರಾಮೋಹಳ್ಳಿಯಲ್ಲಿ ನಡೆದಿದೆ. ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ತುಂಬಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ರಾಮೋಹಳ್ಳಿಯಲ್ಲಿ ಕಿಡಿಗೇಡಿಗಳು ಮಹಿಳೆಯನ್ನು ಕೊಂದು ಸೂಟ್​ಕೇಸ್​ನಲ್ಲಿ ಶವ ತುಂಬಿ ಕೆರೆಗೆ ಬಿಸಾಡಿದ್ದಾರೆ. ಕಳೆದ ಎರಡ್ಮೂರು ದಿನಗಳ ಹಿಂದೆ ಶವ ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಕೆರೆಯಲ್ಲಿ ಶವ ತೇಲುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಕುಂಬಳಗೋಡು ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *