Breaking News

ಅಪ್ರಾಪ್ತೆ ಮೇಲೆ ಅತ್ಯಾಚಾರ, ಮೂವರು ಅರೆಸ್ಟ್​!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ, ಮದ್ಯಪಾನ ಮಾಡಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಜುಲೈ 17ರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಂಧಿತರನ್ನು ನವೀನ್, ವೆಂಕಟರಮಣ ಮತ್ತು ರೇಣುಕಾ ಎಂದು ಗುರುತಿಸಲಾಗಿದೆ. ಆರೋಪಿಗಳು ಅಪ್ರಾಪ್ತೆಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ದೌರ್ಜನ್ಯ ಎಸಗಿ, ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಬೆಳಗ್ಗೆ ಮನೆಗೆ ಬಂದ ಮಗಳನ್ನು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದ್ದು, ತಾಯಿ ನೀಡಿದ ದೂರಿನ ಆಧಾರದ ಮೇಲೆ ದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ಮೂವರನ್ನೂ ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *