ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಪಾಪನ ಕೆರೆ ಬಳಿ ಜೀವಂತ ಉಡವನ್ನು ಹಿಡಿದು ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರು ಜಿಲ್ಲೆಯ ಹೊಸಕೋಟೆ ತಾಲೂಕಿನ ಜಮೀರುಲ್ಲ ಶರೀಫ್ ಹಾಗೂ ಆನೇಕಲ್ ತಾಲೂಕಿನ ಶೇಕ್ ರಫೀಕ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಜೀವಂತ ಉಡವನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಸಂಚಾರ ದಳದ ಪೊಲೀಸರು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

