ಬೆಂಗಳೂರು: ರಾಜಧಾನಿಯ ಕೆಂಗೇರಿ ವ್ಯಾಪ್ತಿಯಲ್ಲಿ ನಡೆದಿರುವ ಭೀಕರ ಘಟನೆ ಆತಂಕ ಮೂಡಿಸಿದೆ. ಜುಲೈ 15ರಿಂದ ನಾಪತ್ತೆಯಾಗಿದ್ದ 61 ವರ್ಷದ ಜಯಮ್ಮ ಅವರ ಮೃತದೇಹ ರಾಮೋಹಳ್ಳಿ ಕೆರೆಯಲ್ಲಿ ಕೆಂಪು ಬಣ್ಣದ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಕುಂಬಳಗೂಡು ಪೊಲೀಸರು ಸೂಟ್‌ಕೇಸ್ ಪರಿಶೀಲಿಸಿದಾಗ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರು ಮೃತದೇಹವನ್ನು ಜಯಮ್ಮ ಅವರದ್ದೇ ಎಂದು ಗುರುತಿಸಿದ್ದಾರೆ. ಚಿನ್ನಾಭರಣ ದೋಚಿದ ಬಳಿಕ ಬೇರೆಡೆ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಕೆರೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಕುಂಬಳಗೂಡು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು, ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ಸೇರಿದಂತೆ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

