Breaking News

ಕೈತುಂಬಾ ಸಂಬಳ ಕೊಡ್ತಾರೆ ಅಂತಾ ಫಾರಿನ್ ಹೋಗೋ ಮುನ್ನ ಎಚ್ಚರ! ನಿಮ್ಮಿಂದಲೆ ಸೈಬರ್ ಕ್ರೈಮ್ ಮಾಡಿಸ್ತಾರೆ ದುಷ್ಟರು

ಬೆಂಗಳೂರು: ವಿದೇಶದಲ್ಲಿ ಹೆಚ್ಚಿನ ಸಂಬಳದ ಉದ್ಯೋಗದ ಆಮಿಷಕ್ಕೆ ಒಳಗಾಗಿ ಮಯನ್ಮಾರ್‌ನ ಚೀನಿ ಸೈಬರ್ ಗ್ಯಾಂಗ್ ಕೈಗೆ ಸಿಲುಕಿದ್ದ ಕರ್ನಾಟಕದ ಇಬ್ಬರು ಯುವಕರನ್ನು ಕರ್ನಾಟಕ ಸೈಬರ್ ಕಮಾಂಡ್, I4C, ಜಾರಿ ನಿರ್ದೇಶನಾಲಯ (ED) ಹಾಗೂ ಭಾರತೀಯ ರಾಯಭಾರ ಕಚೇರಿಯ ಜಂಟಿ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ರಕ್ಷಿಸಿ ತಾಯ್ನಾಡಿಗೆ ಕರೆತರಲಾಗಿದೆ. ಥೈಲ್ಯಾಂಡ್‌ನಲ್ಲಿ ಡೇಟಾ ಎಂಟ್ರಿ ಉದ್ಯೋಗ ನೀಡುವುದಾಗಿ ನಂಬಿಸಿ ಕರೆದೊಯ್ದ ಬಳಿಕ, ಯುವಕರನ್ನು ಅಕ್ರಮವಾಗಿ ಮಯನ್ಮಾರ್‌ಗೆ ಕರೆದೊಯ್ದು ಪಾಸ್‌ಪೋರ್ಟ್‌ಗಳನ್ನು ಕಸಿದುಕೊಂಡು ಆನ್‌ಲೈನ್ ಸೈಬರ್ ವಂಚನೆ ಮತ್ತು ಕ್ರಿಪ್ಟೋ ಸ್ಕ್ಯಾಮ್‌ಗಳಲ್ಲಿ ತೊಡಗುವಂತೆ ಒತ್ತಡ ಹೇರಲಾಗಿತ್ತು. ಕೆಲಸ ನಿರಾಕರಿಸಿದರೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಕುಟುಂಬಸ್ಥರ ಮಾಹಿತಿ ಮೇರೆಗೆ ಭಾರತೀಯ ರಾಯಭಾರ ಕಚೇರಿ, ವಿದೇಶಾಂಗ ಸಚಿವಾಲಯ ಹಾಗೂ ಕರ್ನಾಟಕ ಸೈಬರ್ ಕಮಾಂಡ್ ಸಮನ್ವಯದ ಕಾರ್ಯಾಚರಣೆಯಲ್ಲಿ ಯುವಕರನ್ನು ಸುರಕ್ಷಿತವಾಗಿ ಮರಳಿ ಕರೆತರಲಾಗಿದೆ. ವಿದೇಶಿ ಉದ್ಯೋಗಗಳ ಹೆಸರಿನಲ್ಲಿ ಬರುವ ನಕಲಿ ಏಜೆಂಟರ ಬಗ್ಗೆ ಎಚ್ಚರಿಕೆಯಿಂದಿದ್ದು, ಅಧಿಕೃತ ಸಂಸ್ಥೆಗಳ ಮೂಲಕವೇ ಉದ್ಯೋಗ ಪರಿಶೀಲನೆ ನಡೆಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *