Breaking News

ಬೆಳ್ತಂಗಡಿ: ಅಕ್ರಮವಾಗಿ ಮರ ಕಡಿದು ಸಾಗಾಟ ಆರೋಪ ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಗುತ್ತು ಪ್ರದೇಶದಲ್ಲಿ ಅಕ್ರಮವಾಗಿ 16 ಮರಗಳನ್ನು ಕಡಿದು ದಿಮ್ಮಿ ಹಾಗೂ ಕಟ್ಟಿಗೆಯಾಗಿ ಸಂಗ್ರಹಿಸಿ, ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಪತ್ತೆಹಚ್ಚಿದೆ. ದಾಳಿ ವೇಳೆ 51 ಮರದ ದಿಮ್ಮಿಗಳು, 3 ಘನ ಮೀಟರ್ ಕಟ್ಟಿಗೆ ಹಾಗೂ ಸಾಗಾಟಕ್ಕೆ ಬಳಸಿದ್ದ ಲಾರಿಯನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ₹6.30 ಲಕ್ಷ ಎಂದು ಅಂದಾಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುದುವೆಟ್ಟು ಗ್ರಾಮದ ದಿನೇಶ್ ಗೌಡ (41) ಹಾಗೂ ಬಂಟ್ವಾಳ ತಾಲೂಕಿನ ಲಾರಿ ಚಾಲಕ ಶಹದ್ದುನ್ನಿ ಮೊಹಮ್ಮದ್ ಜಿ (27) ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ. ಕರ್ನಾಟಕ ಅರಣ್ಯ ಕಾಯ್ದೆ ಹಾಗೂ ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆಯ ವಿವಿಧ ವಿಧಿಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ತನಿಖೆ ಮುಂದುವರಿಸಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *