Breaking News

ಕೋಚಿಂಗ್ ಸೆಂಟರ್ ನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ

ಬೆಳಗಾವಿ: ಕೋಚಿಂಗ್ ಸೆಂಟರ್ ವೊಂದರಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ಕೋಚಿಂಗ್ ಸೆಂಟರ್‌ನ ಶಿಕ್ಷಕ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾನೆ ಎಂದು ಆರೋಪಿಸಲಾಗಿದ್ದು, ಬಾಲಕಿಯರ ಪೋಷಕರು ಕೋಚಿಂಗ್ ಸೆಂಟರ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಗೋಕಾಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಸಂತ್ರಸ್ತ ಬಾಲಕಿಯರ ಪೋಷಕರು ಆರೋಪಿ ಶಿಕ್ಷಕನ ಬಂಧಿಸಿ ತಮಗೆ ನ್ಯಾಯ ಕೊಡಿಸುವಂತೆ ಕಣ್ಣೀರಿಟ್ಟಿದ್ದಾರೆ. ತಕ್ಷಣ ಪೊಲೀಸರು ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಗೋಕಾಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *