Breaking News

ಶಿವಾಜಿನಗರದಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿಗಳ ಮೇಲೆ ಹಲ್ಲೆ: ಪ್ರಕರಣದಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಜಿಬಿಎ (GBA) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಐವರು ಆರೋಪಿಗಳನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 10ನೇ ಎಸಿಎಂಎಂ ಮೆಯೋಹಾಲ್ ನ್ಯಾಯಾಲಯ ಆದೇಶಿಸಿದೆ. ಪ್ರಕರಣದಲ್ಲಿ ಬಂಧಿತ 12 ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಅವರಲ್ಲಿ ಬಸವರಾಜ್ ಪಡುಕೋಟೆ, ರಘು, ಬಸವರಾಜ್, ಪಾರ್ಥಿಬನ್ ಹಾಗೂ ಪರಶುರಾಮ್ ಅವರನ್ನು ವಿಚಾರಣೆಗಾಗಿ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪ್ರಕರಣ ದಾಖಲಿಸಿಕೊಂಡ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ಸೇರಿ 12 ಮಂದಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *