Breaking News

ಸಾರಿಗೆ ಬಸ್ ಪಲ್ಟಿ; ವೃದ್ಧೆ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ಸಮೀಪ ಧಾರವಾಡ–ಸವದತ್ತಿ ರಸ್ತೆಯಲ್ಲಿ ಸಾರಿಗೆ ಬಸ್ ಪಲ್ಟಿಯಾಗಿ ಓರ್ವ ವೃದ್ಧ ಮಹಿಳೆ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ದಾವಣಗೆರೆಯಿಂದ ಮಹಾರಾಷ್ಟ್ರದ ಮಿರಜ್‌ಗೆ ತೆರಳುತ್ತಿದ್ದ ಬಸ್‌ನ ಎಕ್ಸಲ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಮುನವಳ್ಳಿ ಗ್ರಾಮದ ಹುಸೇನ್ ಬಿ. ಕೆಂಗನೂರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳೀಯರು ಮತ್ತು ಸಹಪ್ರಯಾಣಿಕರು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *