ರಾಜ್ಯ ಪೊಲೀಸ್ ಇಲಾಖೆಯಲ್ಲಿ ಜಾರಿಯಲ್ಲಿರುವ ಸುಧಾರಿತ ಬೀಟ್ ವ್ಯವಸ್ಥೆ ವಿರುದ್ಧ ಸಿಬ್ಬಂದಿಯೊಬ್ಬರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬೀಟ್ ಸಿಬ್ಬಂದಿಯ ಮೇಲೆಯೇ ಸಂಪೂರ್ಣ ಹೊಣೆಗಾರಿಕೆ ಹಾಕಲಾಗುತ್ತಿದ್ದು, ಮೇಲಧಿಕಾರಿಗಳು ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ. ಪತ್ರದಲ್ಲಿ ಅಧಿಕಾರ ದುರ್ಬಳಕೆ, ಮಾನಸಿಕ ಕಿರುಕುಳ, ಭ್ರಷ್ಟಾಚಾರ, ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರೂ ಕ್ರಮ ಕೈಗೊಳ್ಳದಿರುವುದು ಹಾಗೂ ಠಾಣೆ ವರ್ಗಾವಣೆಗೆ ಹಣದ ವ್ಯವಹಾರ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳನ್ನೂ ಉಲ್ಲೇಖಿಸಲಾಗಿದೆ. ಕಳವು ಅಥವಾ ಅಕ್ರಮ ನಡೆದರೆ ಮೊದಲು ಬೀಟ್ ಸಿಬ್ಬಂದಿಯನ್ನೇ ಅಮಾನತುಗೊಳಿಸಲಾಗುತ್ತಿದೆ ಎಂದು ಅಳಲು ವ್ಯಕ್ತಪಡಿಸಲಾಗಿದೆ. ಈ ಪತ್ರವನ್ನು ಮುಖ್ಯಮಂತ್ರಿ ಕಚೇರಿ ಗಂಭೀರವಾಗಿ ಪರಿಗಣಿಸಿದ್ದು, ಒಳಾಡಳಿತ ಇಲಾಖೆಗೆ ರವಾನಿಸಲಾಗಿದೆ. ಡಿಜಿಪಿ ರಾಜ್ಯದ ಎಲ್ಲಾ ಪೊಲೀಸ್ ಘಟಕಗಳಿಗೆ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಆರೋಪಗಳ ಕುರಿತು ತನಿಖೆ ನಡೆಯಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

