ಗೋಕಾಕ: ಇಲ್ಲಿಯ ಕೋಚಿಂಗ್ ಸೆಂಟರ್‌ನಲ್ಲಿ ಕಲಿಕೆಗೆ ದಾಖಲಾಗಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪಿದಡಿ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ತರಬೇತಿ ಕೇಂದ್ರದಲ್ಲಿ ಶಿಕ್ಷಕನಾಗಿರುವ ಗಿರೀಶ ರಾಜಗೌಡ ಪಾಟೀಲ್ (35) ಬಂಧಿತ ಆರೋಪಿ. ಒಂದು ತಿಂಗಳ ಹಿಂದೆ ದಾಖಲಾಗಿದ್ದ ವಿದ್ಯಾರ್ಥಿನಿಯರು ಕೃತ್ಯದ ಬಗ್ಗೆ ಪೋಷಕರಿಗೆ ತಿಳಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪೋಷಕರು ಕೇಂದ್ರಕ್ಕೆ ನುಗ್ಗಿ ಆರೋಪಿಗೆ ಥಳಿಸಿದ್ದಾರೆ. ಗೋಕಾಕ ಶಹರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

