Breaking News

‘ಜೇಬಿನಲ್ಲಿ ಡ್ರಗ್​ ಇಟ್ಟು ಕೇಸ್​ ಹಾಕ್ಬಿಡ್ತೀನಿ ಹುಷಾರ್’​​; ಪ್ರತಿಭಟನಾಕಾರರಿಗೆ ಬೆದರಿಕೆ ಹಾಕಿದ ಮುಂಬೈ ಪೊಲೀಸ್ ಅಮಾನತು

ನೀಟ್ ಪರೀಕ್ಷೆ ಅಕ್ರಮ ವಿರೋಧಿಸಿ ಮುಂಬೈನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ ಪೊಲೀಸ್ ಅಧಿಕಾರಿಯ ವಿಡಿಯೋ ವೈರಲ್ ಆಗಿದೆ. ಈ ಘಟನೆ ಭಾರೀ ವಿವಾದಕ್ಕೆ ಕಾರಣವಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಂಬಂಧಿತ ಪೊಲೀಸ್ ಅಧಿಕಾರಿಯನ್ನು ಹುದ್ದೆಯಿಂದ ವಜಾಗೊಳಿಸಿದ್ದು, ಪ್ರಕರಣದ ಕುರಿತು ತನಿಖೆಗೆ ಆದೇಶಿಸಲಾಗಿದೆ. ವಿದ್ಯಾರ್ಥಿಗಳಿಗೆ ಜಾಮೀನು ಸಿಗದಂತೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿರುವುದು ವಿಡಿಯೋದಲ್ಲಿ ಕೇಳಿಬಂದಿದೆ. ಈ ಘಟನೆಗೆ ಮುಂಬೈ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಹಾಗೂ ಸಮಗ್ರ ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *