Breaking News

ಜಾತ್ರೆಗೆ ಹೋಗುವ ವಿಚಾರಕ್ಕೆ ಪತಿ ಜೊತೆ ಜಗಳ; ಅದೇ ಸಿಟ್ಟಿನಲ್ಲಿ ದೂಧಗಂಗಾ ನದಿಗೆ ಹಾರಿದ ಪತ್ನಿ!

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ಜಾತ್ರೆಗೆ ಹೋಗುವ ವಿಚಾರವಾಗಿ ಪತಿಯೊಂದಿಗೆ ಜಗಳವಾಡಿದ ಬಳಿಕ 25 ವರ್ಷದ ಮಂಜುಳಾ ವಂಜೀರೆ ದೂದಗಂಗಾ ನದಿಗೆ ಹಾರಿರುವ ಘಟನೆ ನಡೆದಿದೆ. ಮನೆಯಿಂದ ಹೊರಟ ಮಂಜುಳಾ ನದಿಯ ಬಳಿ ತೆರಳಿದ್ದು, ಅಲ್ಲಿಯೇ ಅವರ ಚಪ್ಪಲಿ ಮತ್ತು ಬಟ್ಟೆಗಳು ಪತ್ತೆಯಾಗಿವೆ. ಮಾಹಿತಿ ತಿಳಿದು ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್ ತಂಡಗಳು ಶೋಧ ಕಾರ್ಯ ಆರಂಭಿಸಿವೆ. ನೀರಿನ ಹರಿವು ಹೆಚ್ಚಿರುವುದರಿಂದ ಮಹಿಳೆ ಇನ್ನೂ ಪತ್ತೆಯಾಗಿಲ್ಲ. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಅನಿಲ್ ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *