Breaking News

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಕಿರುಕುಳ ಆರೋಪ ಹೊತ್ತ ಅತ್ತೆ, ಮಾವ, ನಾದಿನಿ ಅರೆಸ್ಟ್

ಸುಳ್ಯದ ಸಂಪಾಜೆಯಲ್ಲಿ ಅಸಹಜವಾಗಿ ಮೃತಪಟ್ಟಿದ್ದ ಫಾತಿಮತ್ ನಿಶಾನಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಆಕೆಯ ಮಾವ, ಅತ್ತೆ ಹಾಗೂ ನಾದಿನಿಯನ್ನು ಬಂಧಿಸಿದ್ದಾರೆ. ಮೃತಳ ತಾಯಿ ನೀಡಿದ ದೂರಿನ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ. ಮದುವೆಯಾದ ಬಳಿಕ ಫಾತಿಮಾಳಿಗೆ ಅತ್ತೆ-ಮಾವ ಮತ್ತು ನಾದಿನಿಯಿಂದ ನಿರಂತರ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಸಾವಿಗೆ ಮುನ್ನ ತಾಯಿಗೆ ಕರೆ ಮಾಡಿ ಕಿರುಕುಳದ ಬಗ್ಗೆ ತಿಳಿಸಿದ್ದಳು ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಸಾವಿನ ನಿಖರ ಕಾರಣ ಬಹಿರಂಗವಾಗಲಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *