ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದ ಪಿಜಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು 10ಕ್ಕೂ ಹೆಚ್ಚು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಿನ ಜಾವ ಅಡುಗೆ ಮನೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಕಟ್ಟಡ ನಡುಗಿದೆ. ಗಾಯಾಳುಗಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಅಗ್ನಿಶಾಮಕ ದಳ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಸ್ಫೋಟದಿಂದ ಕಟ್ಟಡದ ಗೋಡೆಗಳು ಹಾಗೂ ಪೀಠೋಪಕರಣಗಳು ಹಾನಿಗೊಳಗಾಗಿವೆ. ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಗ್ಯಾಸ್ ಸೋರಿಕೆ ಅಥವಾ ತಾಂತ್ರಿಕ ದೋಷದಿಂದ ಸ್ಫೋಟ ಸಂಭವಿಸಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

