Breaking News

ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆಮಾಡಿ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ಕೊಟ್ಟ ಆರೋಪಿ

ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ತುಂಬಲ–ಕೆಂಪಯ್ಯನಹುಂಡಿ ರಸ್ತೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಮರ್ಮಾಂಗ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹತ್ಯೆಗೀಡಾದವರು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಉಗನಿಯಪಾಳ್ಯದ ಗೋವಿಂದ್ (30) ಎಂದು ಗುರುತಿಸಲಾಗಿದ್ದು, ಅದೇ ಗ್ರಾಮದ ಪ್ರಸನ್ನ ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಹತ್ಯೆಯ ಬಳಿಕ ಆರೋಪಿ ತಾನೇ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ. ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *