ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ನಡೆದಿದ್ದ ಅನುಮಾನಾಸ್ಪದ ‘ಹಿಟ್ & ರನ್’ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಅಪಘಾತದಲ್ಲಿ ಮೃತಪಟ್ಟಿದ್ದಾನೆ ಎಂದು ಭಾವಿಸಲಾಗಿದ್ದ ಹಾಸನದ ವಿಜಯನಗರ ನಿವಾಸಿ ಯಶವಂತ್ (26) ಅವರನ್ನು ಸ್ನೇಹಿತ ಸಚಿನ್ ಹಣಕಾಸಿನ ವೈಷಮ್ಯದಿಂದ ಕೊಲೆ ಮಾಡಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಜೂನ್ 12ರಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಯಶವಂತ್ ಮೃತದೇಹ ಪತ್ತೆಯಾಗಿದ್ದು, ಸ್ಥಳದಲ್ಲಿ ಗೂಡ್ಸ್ ಆಟೋ ಪಲ್ಟಿಯಾಗಿದ್ದ ಕಾರಣ ಆರಂಭದಲ್ಲಿ ಅಪಘಾತ ಪ್ರಕರಣವೆಂದು ದಾಖಲಾಗಿತ್ತು. ಆದರೆ, ಮೃತನ ಬೈಕ್ ನಾಪತ್ತೆಯಾಗಿದ್ದರಿಂದ ಅನುಮಾನಗೊಂಡ ಪೊಲೀಸರು ಒಂದೂವರೆ ತಿಂಗಳ ಕಾಲ ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ನಡೆಸಿದರು. ಕಾರು ಮಾರಾಟದ ಹಣದ ವಿಚಾರವಾಗಿ ಉಂಟಾದ ಜಗಳದ ವೇಳೆ ಸಚಿನ್ ಯಶವಂತ್‌ನನ್ನು ಕೊಲೆ ಮಾಡಿ, ಅದನ್ನು ಅಪಘಾತದಂತೆ ಬಿಂಬಿಸಲು ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸಚಿನ್‌ನನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

