Breaking News

ದಿಟ್ಟಿಸಿ ನೋಡಿದ್ದೇ ತಪ್ಪಾಯಿತೇ? ಭೀಮಾ ತೀರದಲ್ಲಿ ಮತ್ತೆ ರಕ್ತದ ಓಕುಳಿ, ಆಟೋ ಚಾಲಕನ ಭೀಕರ ಹತ್ಯೆ!

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲಗಾಣಗಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಟಂ-ಟಂ ಚಾಲಕ ದತ್ತು ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಶುಕ್ರವಾರ ನಸುಕಿನ ಜಾವ ಅವಧೂತ ಆಶ್ರಮದ ಸಮೀಪ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ದತ್ತು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ನೀಡಿದ ಹೇಳಿಕೆಯಲ್ಲಿ, “ಆರೋಪಿಗಳು ತಂಗಿದ್ದ ಜಾಗದಲ್ಲಿ ದಿಟ್ಟಿಸಿ ನೋಡಿದೆ ಎಂಬ ನೆಪವಿಟ್ಟು ನನ್ನ ಮೇಲೆ ಹಲ್ಲೆ ನಡೆಸಿದರು” ಎಂದು ದತ್ತು ತಿಳಿಸಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಪ್ರಜ್ವಲ್ ಮಲ್ಕಪ್ಪ ಹೊಸಮನಿ ಹಾಗೂ ಪ್ರೀತಮ್ ಹೊಸಮನಿ ವಿರುದ್ಧ ಆರೋಪ ಕೇಳಿಬಂದಿದೆ. ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆ ಹಾಗೂ ಘಟನೆಯ ಸಂಪೂರ್ಣ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಘಟನೆ ಬಳಿಕ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *