ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಅಕ್ರಮ ಭೂ ಮಂಜೂರಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಕಂದಾಯ ಮತ್ತು ಭೂಮಾಪನಾ ಇಲಾಖೆಯ 100ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಮೂಹಿಕ ರಜೆ ಪಡೆದಿದ್ದಾರೆ. ಕೆಲವರು ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡು ಕಚೇರಿಗೂ ಗೈರಾಗಿದ್ದಾರೆ ಎನ್ನಲಾಗಿದೆ. ಹೇಮಾವತಿ, ಯಗಚಿ ಹಾಗೂ ವಾಟೆಹೊಳೆ ಜಲಾಶಯ ಯೋಜನೆಗಳ ಸಂತ್ರಸ್ತರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸಾವಿರಾರು ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ ಆರೋಪದ ತನಿಖೆ ನಡೆಯುತ್ತಿದೆ. ಇತ್ತೀಚೆಗೆ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸೇರಿದಂತೆ ಹಲವು ಮಂದಿಯ ಬಂಧನದ ಬಳಿಕ ಅಧಿಕಾರಿಗಳಲ್ಲಿ ಆತಂಕ ಹೆಚ್ಚಾಗಿದೆ. 2015ರಿಂದ 2019ರ ಅವಧಿಯಲ್ಲಿ ಸಕಲೇಶಪುರ ಸೇರಿದಂತೆ ಹಲವು ತಾಲೂಕುಗಳಲ್ಲಿ ಕಾರ್ಯನಿರ್ವಹಿಸಿದ್ದ ತಹಶೀಲ್ದಾರರು, ಉಪ ತಹಶೀಲ್ದಾರರು ಸೇರಿದಂತೆ 150ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ತನಿಖಾ ವರದಿಯಲ್ಲಿ ಉಲ್ಲೇಖವಾಗಿದ್ದು, ಮುಂದಿನ ಕಾನೂನು ಕ್ರಮದ ನಿರೀಕ್ಷೆಯಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

