Breaking News

ಗದಗ: ಹಾಸ್ಟೆಲ್‌ನಲ್ಲಿ ವೈದ್ಯೆ ವಿದ್ಯಾರ್ಥಿನಿ ಶವ ಪತ್ತೆ, ಅನುಮಾನ ಹುಟ್ಟಿಸಿದ ಡೆತ್ ನೋಟ್! ಕೊರಳಿಗೆ ಹಾಕಿದ ಬಟ್ಟೆ!

ಗದಗ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್ (MPH) ವಿದ್ಯಾರ್ಥಿನಿ ಡಾ. ವೀಣಾ ಹಾನಾಪುರ (25) ಅವರು ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾರೆ. ರಾತ್ರಿ ಕೋಣೆಯಿಂದ ಹೊರಬಾರದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು, ಮುಖದ ಮೇಲಿನ ಗಾಯಗಳು, ಕಾಲು ನೆಲಕ್ಕೆ ತಾಗಿದ್ದ ಸ್ಥಿತಿ ಹಾಗೂ ಪತ್ತೆಯಾದ ಡೆತ್ ನೋಟ್ ಮಗಳ ಹಸ್ತಾಕ್ಷರವಲ್ಲ ಎಂದು ಆರೋಪಿಸಿ, ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಶಂಕಿಸಿ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವರದಿ ಮತ್ತು ತನಿಖೆಯ ಆಧಾರದ ಮೇಲೆ ಸಾವಿನ ನಿಖರ ಕಾರಣ ತಿಳಿಯಬೇಕಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *