Breaking News

ಟ್ಯಾಂಕರ್ ಚಾಲಕನನ್ನು ಬೆನ್ನಟ್ಟಿ ಕಲ್ಲಿನಿಂದ ಜಜ್ಜಿ ಹಲ್ಲೆ-

ಬೆಂಗಳೂರುದ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ರೋಡ್ ರೇಜ್ ಪ್ರಕರಣ ನಡೆದಿದ್ದು, ನೀರಿನ ಟ್ಯಾಂಕರ್ ಚಾಲಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ರಸ್ತೆ ಬದಿಯಲ್ಲಿದ್ದ ಮರದ ಹಲಗೆಯ ಮೇಲೆ ಟ್ಯಾಂಕರ್ ಹರಿದಿದ್ದನ್ನು ಪ್ರಶ್ನಿಸಿ ಆರಂಭವಾದ ವಾಗ್ವಾದ ಬಳಿಕ ಆರೋಪಿಗಳು ಸುಮಾರು 4 ಕಿಲೋಮೀಟರ್‌ಗಳಷ್ಟು ಟ್ಯಾಂಕರ್ ಅನ್ನು ಬೆನ್ನಟ್ಟಿದ್ದಾರೆ. ಬೇಗೂರು ಸಮೀಪ ಟ್ಯಾಂಕರ್ ತಡೆದು ಕಲ್ಲು ತೂರಾಟ ನಡೆಸಿದ ಆರೋಪಿಗಳು ವಾಹನದ ಗಾಜು ಪುಡಿಗೈದು, ಚಾಲಕ ಅಸ್ಲಿನ್ ಅವರನ್ನು ಕೆಳಗೆ ಎಳೆದು ಕಲ್ಲಿನಿಂದ ತಲೆಗೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿವೆ. ಪರಪ್ಪನ ಅಗ್ರಹಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ವಿಡಿಯೊ ಆಧರಿಸಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *