Breaking News

ಲೋಕಾಯುಕ್ತ ದಾಳಿ: ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲೇಡಿ ಆಫೀಸರ್

ಗದಗ: ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫಿಕಾ ಹಳ್ಳೂರು ಹಾಗೂ ಕಾರು ಚಾಲಕ ಮೌಲಾನಾರನ್ನು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ. ಬಾಲ ಮಂದಿರದಲ್ಲಿ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಜಿ ಸಲ್ಲಿಸಿದ್ದ ವ್ಯಕ್ತಿಯಿಂದ ಆರಂಭದಲ್ಲಿ 30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಬಳಿಕ 15 ಸಾವಿರಕ್ಕೆ ಒಪ್ಪಂದ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ಹಣವನ್ನು ಚಾಲಕ ಮೌಲಾನಾ ಮೂಲಕ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದಾರೆ. ದಾಳಿಯ ಬಳಿಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲೂಕು ಕಚೇರಿಯಲ್ಲೂ ದಾಖಲೆಗಳ ಪರಿಶೀಲನೆ ನಡೆಸಲಾಯಿತು. ಲೋಕಾಯುಕ್ತ ಎಸ್‌ಪಿ ಟಿ. ಸಿದ್ಧಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಲೋಕೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಇನ್ಸ್ಪೆಕ್ಟರ್ ಪರಮೇಶ್ವರ ಕವಟಗಿ, ಎಸ್.ಎಸ್. ತೇಲಿ ಸೇರಿದಂತೆ ಅಧಿಕಾರಿಗಳ ತಂಡ ಪಾಲ್ಗೊಂಡಿತ್ತು. ರಫಿಕಾ ಹಳ್ಳೂರು ಹಾಗೂ ಚಾಲಕ ಮೌಲಾನಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಗದಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *