Breaking News

ಚಿಂತಾಮಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 1 ಕೆಜಿಗೂ ಹೆಚ್ಚು ಗಾಂಜಾ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

ಚಿಂತಾಮಣಿ ನಗರದ ಎನ್‌ಎನ್‌ಟಿ ವೃತ್ತದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಚಿಂತಾಮಣಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶ್ರೀನಿವಾಸ್ (19) ಹಾಗೂ ಬೆಂಗಳೂರು ಮೂಲದ ರೋಜಾ (40) ಎಂದು ಗುರುತಿಸಲಾಗಿದೆ. ಗಸ್ತಿನಲ್ಲಿದ್ದ ಪೊಲೀಸರಿಗೆ ಬೆಳಿಗ್ಗೆ ಸುಮಾರು 11:30ರ ವೇಳೆಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಎನ್‌ಎನ್‌ಟಿ ರಸ್ತೆಯಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಆರೋಪಿಗಳು ಬ್ಯಾಗ್‌ನಲ್ಲಿ ಗಾಂಜಾ ಇಟ್ಟು ಗ್ರಾಹಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಂದ 1 ಕೆಜಿ 180 ಗ್ರಾಂ ಗಾಂಜಾ ಹಾಗೂ ಬ್ಯಾಗ್‌ನ್ನು ಜಪ್ತಿ ಮಾಡಲಾಗಿದೆ. ಪಿಎಸ್‌ಐ ರಮೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕುರಿತು ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *