Breaking News

ರಾತ್ರೋ ರಾತ್ರಿ ಅಪರಿಚಿತ ದುಷ್ಕರ್ಮಿಗಳ ದಾಂಧಲೆ – ಮನೆ, ಕಾರು ಧ್ವಂಸ!

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ದಿಣ್ಣೆಪಾಳ್ಯದಲ್ಲಿ ನಾಲ್ವರು ದುಷ್ಕರ್ಮಿಗಳು ಲಾಂಗು-ಮಚ್ಚುಗಳಿಂದ ಮನೆಯೊಂದರ ಮೇಲೆ ದಾಳಿ ನಡೆಸಿ ಭೀತಿ ಸೃಷ್ಟಿಸಿದ್ದಾರೆ. ಮನೆಯ ಮಾಲೀಕ ವಿಶ್ವನಾಥ ರೆಡ್ಡಿ ಹಾಗೂ ಕುಟುಂಬದವರು ಪ್ರಾಣಭಯದಿಂದ ಮನೆಯೊಳಗೆ ಆಶ್ರಯ ಪಡೆದಿದ್ದು, ದುಷ್ಕರ್ಮಿಗಳು ಬಾಗಿಲು ಒಡೆಯಲು ವಿಫಲವಾದ ಬಳಿಕ ಕಿಟಕಿ ಗಾಜುಗಳು, ಕಾರು, ಬೈಕ್ ಸೇರಿದಂತೆ ಹಲವು ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ದಾಳಿಕೋರರು ಸಮೀಪದ ಅಂಗಡಿ ಹಾಗೂ ಬೈಕ್ ಸವಾರನ ಮೇಲೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *