Breaking News

ವಿದ್ಯುತ್ ಸಂಪರ್ಕದ ವಿಚಾರಕ್ಕೆ ಕಿರಿಕ್ – ಜಮೀನು ಮಾಲಿಕನ ಬರ್ಬರ ಹತ್ಯೆ!

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಗುಳಘಟ್ಟ ಗ್ರಾಮದಲ್ಲಿ ವಿದ್ಯುತ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿರುವ ಘಟನೆ ನಡೆದಿದೆ. ಗುಳಘಟ್ಟ ಗ್ರಾಮದ ರುದ್ರೇಗೌಡ ಕೊಲೆಯಾದ ದುರಂತ ವ್ಯಕ್ತಿಯಾಗಿದ್ದಾರೆ. ನೆರೆಯ ಜಮೀನಿನ ಮಾಲೀಕನ ಜೊತೆಗೆ ಟ್ರಾನ್ಸ್‌ಫಾರ್ಮರ್‌ನಿಂದ ವಿದ್ಯುತ್ ತೆಗೆದುಕೊಳ್ಳುವ ವಿಷಯದಲ್ಲಿ ರುದ್ರೇಗೌಡ ಅವರಿಗೆ ಗಲಾಟೆಯಾಗಿತ್ತು. ಇದೇ ದ್ವೇಷದ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಕೊಲೆ ಮಾಡಿದ ನಂತರ ಆರೋಪಿಗಳು ಮೃತದೇಹದ ಮೇಲೆ ಸ್ಕೂಟರ್ ಎತ್ತಿಹಾಕಿ ವಿಕೃತಿ ಮೆರೆದಿದ್ದಾರೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣಗಳೇನು ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *