Breaking News

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ

ಬೆಂಗಳೂರು: ಹೊರವರ್ತುಲ ರಸ್ತೆಯ 500D ಮಾರ್ಗದ ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ನಡೆದಿದೆ. ಹೆದರದ ಯುವತಿ ಗಟ್ಟಿಯಾಗಿ ಧ್ವನಿ ಎತ್ತಿ ಆರೋಪಿಯ ವಿರುದ್ಧ ಪ್ರತಿಭಟಿಸಿದ್ದಾರೆ. ಯುವತಿಯ ಕಿರುಚಾಟ ಕೇಳಿದ ಚಾಲಕ ಪ್ರವೀಣ್ ತಕ್ಷಣ ಬಸ್‌ನ್ನು ನಿಲ್ಲಿಸಿ ಆರೋಪಿಯನ್ನು ಪ್ರಶ್ನಿಸಿದ್ದಾರೆ. ಆದರೆ ಆರೋಪಿಯು ಚಾಲಕನ ಮೇಲೆಯೇ ಉಗುಳಿದ ಹಿನ್ನೆಲೆಯಲ್ಲಿ ಚಾಲಕ ಹಾಗೂ ಪ್ರಯಾಣಿಕರು ಆರೋಪಿಯನ್ನು ಹಿಡಿದು ನಿಯಂತ್ರಣಕ್ಕೆ ತಂದಿದ್ದಾರೆ. ಯುವತಿಯ ಧೈರ್ಯ ಮತ್ತು ಚಾಲಕ ಪ್ರವೀಣ್ ಅವರ ಸಮಯೋಚಿತ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಮಹಿಳೆಯರ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಜಾಗೃತಿ ಮೂಡಿಸಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *