Breaking News

SIR ಕರ್ತವ್ಯದ ನಡುವೆ PDOಗಳ ಪಾರ್ಟಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸಿದ್ದರಬೆಟ್ಟದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದ ನಡುವೆ ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ಪಾರ್ಟಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗಬೇಕಿದ್ದ ಅಧಿಕಾರಿಗಳು ಕರ್ತವ್ಯದ ವೇಳೆಯೇ ಮೋಜು-ಮಸ್ತಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬರಗಾಲದ ಪರಿಸ್ಥಿತಿಯ ನಡುವೆಯೂ ಗುಂಡು-ತುಂಡಿನ ಪಾರ್ಟಿ ನಡೆಸಿದ್ದು, ಸಿದ್ದೇಶ್ವರಸ್ವಾಮಿ ಹೆಸರಿನಲ್ಲಿ ಪ್ರಾಣಿ ಬಲಿ ನೀಡಿ ಮಾಂಸದೂಟ ಆಯೋಜಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಗೊಲ್ಲಹಳ್ಳಿ ಪಂಚಾಯಿತಿಯ ಬಿಲ್ ಕಲೆಕ್ಟರ್ ನಟರಾಜ್ ಪಾರ್ಟಿ ಆಯೋಜಿಸಿದ್ದರು ಎನ್ನಲಾಗಿದ್ದು, ಹಲವು PDOಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರೆಂದು ಆರೋಪಿಸಲಾಗಿದೆ. ಘಟನೆಯ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *