Breaking News

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಜಿರಳೆ ಪ್ರತಿಭಟನೆಗೆ ಕೊನೆಗೂ ಮಣಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದರೂ, ಈ ಮಾಹಿತಿಯನ್ನು ದೃಢಪಡಿಸುವ ಅಧಿಕೃತ ಪ್ರಕಟಣೆ ಇಲ್ಲ. ಈ ನಡುವೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕೇಂದ್ರ ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ಸಿಜೆಪಿ ವಕ್ತಾರರ ಪ್ರಕಾರ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ಅವರನ್ನು ಶಿಕ್ಷಣ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಲಾಗಿದೆ. ಅಲ್ಲದೆ, ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಬಳಿಕ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಹಾಗೂ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಲಾಗಿದೆ. ಪ್ರತಿಭಟನಾಕಾರರು ಸೋನಂ ವಾಂಗ್ಚುಕ್ ಅವರನ್ನು ಬಿಡುಗಡೆ ಮಾಡಬೇಕು, ಅವರ ಮುಕ್ತ ಓಡಾಟಕ್ಕೆ ಅಡ್ಡಿ ಮಾಡಬಾರದು ಹಾಗೂ ವಿಡಿಯೋ ಸಂದೇಶ ಹಂಚಿಕೊಳ್ಳಲು ಅವಕಾಶ ನೀಡಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ. ಸರ್ಕಾರದಿಂದ ಈ ಬೇಡಿಕೆಗಳ ಕುರಿತು ಇನ್ನೂ ಅಧಿಕೃತ ಪ್ರತಿಕ್ರಿಯೆ ಹೊರಬಿದ್ದಿಲ್ಲ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *