Breaking News

ಮಂಗಳೂರಲ್ಲಿ ಮತ್ತೆ ಹರಿದ ನೆತ್ತರು, ರೌಡಿಶೀಟರ್‌ಗೆ ಮಚ್ಚಿನಿಂದ ಹಲ್ಲೆ

ಮಂಗಳೂರಿನ ಲಾಲ್‌ಬಾಗ್‌ ಸಿಗ್ನಲ್‌ ಬಳಿ ಶನಿವಾರ ಮಧ್ಯಾಹ್ನ ರೌಡಿಶೀಟರ್ ವಿಕ್ಕಿ ಬಪ್ಪಲ್ ಮೇಲೆ ದುಷ್ಕರ್ಮಿಯೊಬ್ಬ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ಕುತ್ತಿಗೆಗೆ ಗಂಭೀರ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಬರ್ಕೆ ಪೊಲೀಸರು ಪ್ರಕರಣ ದಾಖಲಿಸಿ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ತನಿಖೆ ಆರಂಭಿಸಿದ್ದಾರೆ. ವಿಕ್ಕಿ ಬಪ್ಪಲ್ ವಿರುದ್ಧ ಈ ಹಿಂದೆಯೇ ರೌಡಿಶೀಟ್ ತೆರೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೊಂದೆಡೆ, ಬೆಂಗಳೂರಿನ ಬನ್ನೇರುಘಟ್ಟ ಸಮೀಪ ಮನೆಯೊಂದರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಕಿಟಕಿ, ಕಾರಿನ ಗಾಜುಗಳನ್ನು ಪುಡಿಗೈದು ಬಟ್ಟೆ ಅಂಗಡಿಗೂ ಹಾನಿ ಮಾಡಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ; ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *