Breaking News

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಮಂಡ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗುಳಗಟ್ಟ ಗ್ರಾಮದಲ್ಲಿ ನಡೆದಿದೆ. ಗುಳಗಟ್ಟ ಗ್ರಾಮದ ನಿವಾಸಿ ರುದ್ರೇಗೌಡ(57) ಕೊಲೆಯಾದವರು ಎಂದು ಹೇಳಲಾಗಿದೆ. ಕಳೆದ ರಾತ್ರಿ ಅವರನ್ನು ಕೊಲೆ ಮಾಡಲಾಗಿದೆ.ಕೊಲೆ ಮಾಡಿದ ನಂತರ ಮೃತದೇಹದ ಮೇಲೆ ಸ್ಕೂಟಿ ಎಸೆದಿದ್ದಾರೆ. ಟ್ರಾನ್ಸ್ಫಾರ್ಮರ್ ನಿಂದ ವಿದ್ಯುತ್ ತೆಗೆದುಕೊಳ್ಳುವ ವಿಚಾರಕ್ಕೆ ಗಲಾಟೆಯಾಗಿತ್ತು ಎನ್ನಲಾಗಿದೆ. ಪಕ್ಕದ ಜಮೀನಿನ ಮಾಲೀಕನ ಜೊತೆಗೆ ಗಲಾಟೆ ನಡೆದಿದ್ದು, ಇದೇ ವಿಚಾರಕ್ಕೆ ರುದ್ರೇಗೌಡ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *