Breaking News

ಗಾಂಜಾ ಮಾರಲು ಬಂದಿದ್ದ ಕೊ*ಲೆ ಆರೋಪಿ ಅರೆಸ್ಟ್!

ಬೆಳಗಾವಿಯಲ್ಲಿ ಕೊಲೆ ಸೇರಿದಂತೆ ಗಂಭೀರ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಹಳೇ ಆರೋಪಿ ಆಕಾಶ ದಿಲೀಪ್ ದೊಡಮನಿಯನ್ನು ಸಿಸಿಬಿ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು ₹80 ಸಾವಿರ ಮೌಲ್ಯದ ಗಾಂಜಾ, ₹11 ಸಾವಿರ ನಗದು ಹಾಗೂ ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆಕಾಶ ವಿರುದ್ಧ ಈ ಹಿಂದೆ ಕೊಲೆ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿದ್ದು, ಆತ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಹೊಸದಾಗಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *