Breaking News

ಧಾರವಾಡ ಡಿಸಿಸಿ ಅಧ್ಯಕ್ಷರ ಆಯ್ಕೆ: ಅಲ್ತಾಫ್ ಹಳ್ಳೂರಿಗೆ ಮತ್ತೆ ಹೈಕಮಾಂಡ್ ಗ್ರೀನ್ ಸಿಗ್ನಲ್..?

ಡಿಸಿಸಿ ಕುರ್ಚಿ ಕದನ: ಅಲ್ತಾಫ್ ಹಳ್ಳೂರುಗೆ ಮತ್ತೊಮ್ಮೆ ಪಟ್ಟಾಭಿಷೇಕವೇ..?

ಸೂಕ್ತ ಆಕಾಂಕ್ಷಿಗಳ ಕೊರತೆ…? ಹಾಲಿ ಅಧ್ಯಕ್ಷರ ಮುಂದುವರಿಕೆಗೆ ಹೈಕಮಾಂಡ್ ಮತ್ತೊಮ್ಮೆ ಅವಕಾಶವೇ..?

ಧಾರವಾಡ: ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರ ಆಯ್ಕೆ ಮತ್ತೆ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಹಾಲಿ ಅಧ್ಯಕ್ಷ ಅಲ್ತಾಫ್ ಹಳ್ಳೂರನ್ನು ಮತ್ತೊಮ್ಮೆ ಮುಂದುವರಿಸಬೇಕೇ ಎಂಬ ಪ್ರಶ್ನೆ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರ ನಡುವೆ ಕೇಳಿಬರುತ್ತಿದೆ…

ಒಂದೆಡೆ ಅಲ್ತಾಫ್ ಹಳ್ಳೂರು ಅವರನ್ನು ಮತ್ತೆ ಡಿಸಿಸಿ ಅಧ್ಯಕ್ಷರನ್ನಾಗಿ ಮುಂದುವರಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದ್ದರೆ, ಮತ್ತೊಂದೆಡೆ ಹೊಸ ಮುಖಕ್ಕೆ ಅವಕಾಶ ನೀಡಬೇಕು ಎನ್ನುವ ಒತ್ತಾಯವೂ ಕೇಳಿಬರುತ್ತಿದೆ…

ಕೆಲವು ವಲಯಗಳಲ್ಲಿ “ಈ ಹುದ್ದೆಗೆ ಅಲ್ತಾಫ್ ಹಳ್ಳೂರು ಸೂಕ್ತ ಅಭ್ಯರ್ಥಿ ಎಂಬ ಚರ್ಚೆಯೂ ನಡೆಯುತ್ತಿದೆ ಎನ್ನಲಾಗುತ್ತಿದೆ…

ಇದರ ಜೊತೆಗೆ, ಅಲ್ತಾಫ್ ಹಳ್ಳೂರು ಅವರನ್ನು ಹೊರತುಪಡಿಸಿ ಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರು ಸೂಕ್ತ ಅಭ್ಯರ್ಥಿ, ಯಾರು ಸೂಕ್ತರಲ್ಲ ಎಂಬ ವಿಚಾರವೂ ಪಕ್ಷದೊಳಗೆ ಚರ್ಚೆಯಾಗುತ್ತಿದೆ. ವಿವಿಧ ನಾಯಕರ ಹೆಸರುಗಳು ಕೇಳಿಬರುತ್ತಿದ್ದರೂ, ಈವರೆಗೆ ಯಾವುದೇ ಹೆಸರಿನ ಬಗ್ಗೆ ಅಧಿಕೃತ ಸ್ಪಷ್ಟನೆ ಬಂದಿಲ್ಲ…

ಈ ಎಲ್ಲ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ. ಅಲ್ತಾಫ್ ಹಳ್ಳೂರಿಗೆ ಮತ್ತೊಮ್ಮೆ ಡಿಸಿಸಿ ಅಧ್ಯಕ್ಷ ಸ್ಥಾನ ಸಿಗುತ್ತದೆಯೇ, ಅಥವಾ ಹೊಸ ಮುಖಕ್ಕೆ ಅವಕಾಶ ಸಿಗುತ್ತದೆಯೇ ಎಂಬುದಕ್ಕೆ ಶೀಘ್ರದಲ್ಲೇ ಉತ್ತರ ಸಿಗುವ ಸಾಧ್ಯತೆಯಿದೆ…

ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಹಾಗೂ ಕೆಪಿಸಿಸಿ ನಾಯಕತ್ವ ಕೈಗೊಳ್ಳಲಿದ್ದು, ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಕಾತರದಿಂದ ಕಾಯುತ್ತಿದ್ದಾರೆ…

Share News

About Shaikh BigTv

Check Also

ಸ್ನ್ಯಾಕ್ಸ್ ಪ್ಯಾಕೆಟ್‌ನಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಕಾಲೇಜು ಬಳಿ ಮಾರಾಟ: ಆರೋಪಿ ಬಂಧನ

ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉದ್ಯಮಬಾಗ ಪೊಲೀಸರು …

Leave a Reply

Your email address will not be published. Required fields are marked *