Breaking News

ಜಮಖಂಡಿಯಲ್ಲಿ ಬಾರ್​​ ಮುಂದೆ ನಿಂತಿದ್ದ ಕಾರು ಸ್ಫೋಟ; ಎದೆ ಝಲ್ ಎನಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಸಮೀಪದ ಬಾರ್‌ವೊಂದರ ಮುಂದೆ ನಿಲ್ಲಿಸಿದ್ದ ಕಾರು ಏಕಾಏಕಿ ಸ್ಫೋಟಗೊಂಡು ಭಾರೀ ಆತಂಕ ಸೃಷ್ಟಿಸಿದೆ. ಸ್ಫೋಟಗೊಂಡ ಕಾರು ಎಂ.ಜಿ. ತೋರಗಲ್ ಅವರ ಹೆಸರಿನಲ್ಲಿದೆ ಎಂದು ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಕಾರಿನ ಬಿಡಿಭಾಗಗಳು ಚದುರಿಹೋಗಿದ್ದು, ಸಮೀಪದ ಮಳಿಗೆಯ ಗೋಡೆಗಳ ಸಿಮೆಂಟ್ ಕಳಚಿ ಬಿದ್ದಿದೆ. ಕೂಲ್‌ಡ್ರಿಂಕ್ಸ್ ಬಾಟಲ್‌ಗಳು ಒಡೆದು ಸಾಕಷ್ಟು ನಷ್ಟ ಉಂಟಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಘಟನೆ ನಡೆದ ಸ್ಥಳಕ್ಕೆ ಸೊಕೊ ತಂಡ ಹಾಗೂ ಜಮಖಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಫೋಟದ ನಿಖರ ಕಾರಣ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಶನಿವಾರ ಸಂಜೆ 4:30ರ ಸುಮಾರಿಗೆ ಕಾರನ್ನು ಬಾರ್ ಬಳಿ ನಿಲ್ಲಿಸಲಾಗಿತ್ತು. ಬಳಿಕ ರಾತ್ರಿ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದ್ದು, ಬಾಂಬ್ ಸ್ಫೋಟವಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವಕನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಫೋಟದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *