Breaking News

ತಿರುಪೆ ಶೋಕಿಗಾಗಿ ಲಾಂಗ್ ಹಿಡಿದು ರೀಲ್ಸ್ – ಬಿತ್ತು ಪೊಲೀಸ್ ಕೇಸ್!

ಬೆಂಗಳೂರು: ಸಾರ್ವಜನಿಕ ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಭಯದ ವಾತಾವರಣ ಸೃಷ್ಟಿಸಿದ್ದ ಯುವಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜೆಜೆ ನಗರದ ತೌಸಿಫ್ ಖಾನ್ ಅಲಿಯಾಸ್ ಜಾದೂ (26) ಬಂಧಿತ ಆರೋಪಿ. ಈತ ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ಹಿಡಿದು ವಿಡಿಯೋ ಮಾಡಿ ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದನು. ವಿಡಿಯೋ ವೈರಲ್ ಆಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಲೈಕ್ಸ್ ಮತ್ತು ಫಾಲೋವರ್ಸ್‌ಗಾಗಿ ಇಂತಹ ಪುಂಡಾಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *