ಬೆಳಗಾವಿ: ಪತ್ರಕರ್ತರೆಂದು ಹೇಳಿಕೊಂಡು ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಗಾಂಜಾ ನೀಡಿ ಅದನ್ನೇ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರೆಂಬ ಆರೋಪ ಕೇಳಿಬಂದಿದೆ. ಕೊಟಬಾಗಿ ಗ್ರಾಮದ ಮೆಹಬೂಬ್ ಜಮಾದಾರ್ ಅವರಿಗೆ ಮೊದಲು ಗಾಂಜಾ ಪ್ಯಾಕೆಟ್ ನೀಡಿ, ಬಳಿಕ ಪೊಲೀಸರ ಹೆಸರಿನಲ್ಲಿ ಬೆದರಿಕೆ ಹಾಕಿದ ಆರೋಪಿಗಳು, ರಹಸ್ಯವಾಗಿ ಚಿತ್ರೀಕರಿಸಿದ ವಿಡಿಯೋ ತೋರಿಸಿ ಪ್ರಕರಣ ದಾಖಲಿಸದಂತೆ ₹3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಭಯಗೊಂಡ ಮೆಹಬೂಬ್ ₹60 ಸಾವಿರ ನೀಡಿದರೂ, ಉಳಿದ ಹಣಕ್ಕಾಗಿ ಆರೋಪಿಗಳು ಕಿರುಕುಳ ನೀಡಿದ್ದರು. ಬಳಿಕ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಪ್ರಕಟಿಸಿದ ಹಿನ್ನೆಲೆ ಮೆಹಬೂಬ್ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಹುಕ್ಕೇರಿ ಪೊಲೀಸರು ತನಿಖೆ ನಡೆಸಿ ಕಲ್ಲಪ್ಪ ಮಾಳಾಜ್, ಮಲ್ಲಿಕಾರ್ಜುನ ಜುಲಫಿ, ಪೃಥ್ವಿರಾಜ್ ಚೌಹಾಣ ಹಾಗೂ ಡೇವಿಡ್ ತಂಗೇರಾಳ ಅವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಕಾರು, ಮೊಬೈಲ್ ಫೋನ್‌ಗಳು ಮತ್ತು ನಗದು ವಶಪಡಿಸಿಕೊಳ್ಳಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

