Breaking News

ಜಮೀನು ವಿವಾದಕ್ಕೆ ಸಂಬಂಧಿಕರ ಅಟ್ಟಹಾಸ: ತಂದೆ-ಮಗಳ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೆ ಯತ್ನ!

ತುಮಕೂರು: ತವರು ಮನೆಯ ಆಸ್ತಿ ವಿವಾದದ ಹಿನ್ನೆಲೆ ಸಂಬಂಧಿಕರೇ ತಂದೆ ಹಾಗೂ ಮಗಳ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಉಪ್ಪಿನಕಟ್ಟೆ ಗ್ರಾಮದಲ್ಲಿ ನಡೆದಿದೆ. ಮಹಾಲಿಂಗಯ್ಯ ಮತ್ತು ಅವರ ಮಗಳು ಕಲಾವತಿ ತವರು ಮನೆಯ ಆಸ್ತಿ ಹಕ್ಕಿಗಾಗಿ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿದ್ದರು. ಪ್ರಕರಣದಲ್ಲಿ ತೀರ್ಪು ತಮ್ಮ ವಿರುದ್ಧ ಬರುವ ಭೀತಿಯಿಂದ ಆರೋಪಿಗಳು ಕಲ್ಲೇಶ, ಮಂಜುನಾಥ, ನಾಗರಾಜು, ಪುಷ್ಪಾವತಿ, ಭಾಗ್ಯಮ್ಮ ಹಾಗೂ ರಶ್ಮಿ ಅವರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಮಹಾಲಿಂಗಯ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ಕಲಾವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಸಂಬಂಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನದಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *