ಬೆಂಗಳೂರು: ಮದುವೆಯಾಗಿ ಎರಡು ವರ್ಷವೂ ಕಳೆದಿರದ ಯುವತಿ, ಏಳು ತಿಂಗಳ ಹಸುಗೂಸನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪರಪ್ಪನ ಅಗ್ರಹಾರದ ರಾಯಸಂದ್ರದಲ್ಲಿ ನಡೆದಿದೆ. ಸಾನಿಕ ಗೌಡ ಮೃತ ದುರ್ದೈವಿ. ಬಾಣಂತನಕ್ಕಾಗಿ ತವರು ಮನೆಗೆ ಬಂದಿದ್ದ ಸಾನಿಕ, ಪತಿ ಶರಣ್ ಗೌಡನಿಗೆ ವಿಡಿಯೋ ಕರೆ ಮಾಡಿದ ಬಳಿಕ ಮನೆಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪತಿ ಮತ್ತೊಬ್ಬ ಮಹಿಳೆಯೊಂದಿಗೆ ಮಾತನಾಡಿದ್ದ ಆಡಿಯೋ ಕ್ಲಿಪ್ ಅನ್ನು ಸಾನಿಕಗೆ ಕಳುಹಿಸಿದ್ದರಿಂದ ಮನನೊಂದು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶರಣ್ ಗೌಡನಿಗೆ ಮತ್ತೊಬ್ಬಳೊಂದಿಗೆ ಸಂಬಂಧವಿತ್ತು ಎನ್ನುವ ಆರೋಪವೂ ಇದೆ. ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೇಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಆತ್ಮಹತ್ಯೆಯ ನಿಖರ ಕಾರಣ ಹಾಗೂ ಆರೋಪಗಳ ಸತ್ಯಾಸತ್ಯತೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

