ಮಂಗಳೂರು: ಸಮಾಜ ಸೇವೆಯ ನೆಪದಲ್ಲಿ ಆಂಬ್ಯುಲೆನ್ಸ್ ಬಳಸಿಕೊಂಡು ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಜಲೀಲ್ ಬಾಬಾ ಎಂಬಾತ ಪರಾರಿಯಾಗಿದ್ದು, ಆತನಿಗಾಗಿ ಮಂಗಳೂರು ಸಿಸಿಬಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಕಳೆದ ಎಂಟು ದಿನಗಳಿಂದ ಆತ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾನೆ. ಈ ಪ್ರಕರಣದ ಸುಳಿವು ಎಂಡಿಎಂಎ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯ ವಿಚಾರಣೆಯಿಂದ ಲಭಿಸಿತ್ತು. ಬಳಿಕ ಬಾಗಲಕೋಟೆಯ ಲಾಡ್ಜ್ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ, ಸುಮಾರು ₹5 ಕೋಟಿ ಮೌಲ್ಯದ 5 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದರು. ತನಿಖೆಯಲ್ಲಿ ಬಂಧಿತರಿಂದ ಜಲೀಲ್ ಬಾಬಾಗೆ ಡ್ರಗ್ಸ್ ತಲುಪುತ್ತಿತ್ತು ಹಾಗೂ ಆತ ತಾನು ಚಾಲನೆ ಮಾಡುತ್ತಿದ್ದ ಆಂಬ್ಯುಲೆನ್ಸ್‌ನಲ್ಲೇ ಡ್ರಗ್ಸ್ ಸಾಗಿಸುತ್ತಿದ್ದ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಿರುವ ಸಿಸಿಬಿ ಪೊಲೀಸರು, ಪರಾರಿಯಾಗಿರುವ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

