Breaking News

ಬೆಂಗಳೂರಿನಲ್ಲಿ ಬಾಂಗ್ಲಾದೇಶಿ ದಂಪತಿ ಮೇಲೆ ಹಲ್ಲೆ: ವೈದ್ಯನ ಬಂಧನ

ಬೆಂಗಳೂರು: ಬೆಳ್ಳಂದೂರಿನಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶಿ ದಂಪತಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸಾಯಿ ಕ್ಲಿನಿಕ್‌ನ ವೈದ್ಯ ಡಾ. ನಾಗೇಂದ್ರ ಅವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ನಸ್ರೀನಾ ಬಿಲಾಲ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ ಜಾಮೀನು ದೊರೆತಿದೆ. ದೂರಿನ ಪ್ರಕಾರ, ದಂಪತಿ ಬಾಂಗ್ಲಾದೇಶ ಮೂಲದವರು ಎಂಬ ಕಾರಣಕ್ಕೆ ವೈದ್ಯರು ಅವರ ಪೌರತ್ವವನ್ನು ಪ್ರಶ್ನಿಸಿ ಜಗಳ ಆರಂಭಿಸಿದ್ದು, ಬಳಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆ ಸ್ಥಳೀಯವಾಗಿ ಚರ್ಚೆಗೆ ಕಾರಣವಾಗಿದೆ. ಪೊಲೀಸರ ಪ್ರಕಾರ, ಅಕ್ರಮ ವಲಸಿಗರ ಬಗ್ಗೆ ಅನುಮಾನದಿಂದ ವೈದ್ಯರು ಈ ರೀತಿ ವರ್ತಿಸಿದ್ದಿರಬಹುದು. ಆದರೆ ಕಾನೂನನ್ನು ಕೈಗೆ ತೆಗೆದುಕೊಳ್ಳುವುದು ತಪ್ಪಾಗಿದ್ದು, ಅನುಮಾನವಿದ್ದರೆ ಪೊಲೀಸರಿಗೆ ಮಾಹಿತಿ ನೀಡಬೇಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *