Breaking News

ಹೆಂಗಸರ ನೈಟಿ ತೊಟ್ಟು ಬಂದು ದೇವರ ಹುಂಡಿಗೆ ಕನ್ನ ಹಾಕಿದ ಖದೀಮ! CCTVಯಲ್ಲಿ ಚೋರನ ಕೃತ್ಯ ಸೆರೆ

ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ತಾಲೂಕಿನ ಜಲದಿಹಳ್ಳಿ ಗ್ರಾಮದ ಶಂಕರಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಚಿತ್ರ ರೀತಿಯ ಕಳ್ಳತನ ನಡೆದಿದ್ದು, ಗುರುತು ಸಿಗದಂತೆ ನೈಟಿ ಧರಿಸಿ ಬಂದ ಕಳ್ಳ ಹುಂಡಿಯಲ್ಲಿದ್ದ ನೋಟುಗಳನ್ನು ಕಳವು ಮಾಡಿ, ಚಿಲ್ಲರೆ ನಾಣ್ಯಗಳನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಮಧ್ಯರಾತ್ರಿ ಸುಮಾರು 1:45ರ ವೇಳೆಗೆ ದೇವಸ್ಥಾನಕ್ಕೆ ನುಗ್ಗಿದ ಆರೋಪಿ, ಮುಖ ಮುಚ್ಚಿಕೊಂಡು ಹುಂಡಿ ಒಡೆದು ಹಣ ಕದ್ದಿದ್ದಾನೆ. ಈ ಸಂಪೂರ್ಣ ಕೃತ್ಯ ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಬೆಳಿಗ್ಗೆ ದೇವಸ್ಥಾನಕ್ಕೆ ಬಂದ ಅರ್ಚಕರು ಘಟನೆ ಗಮನಿಸಿ ಅಜ್ಜಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪರಾರಿಯಾಗಿರುವ ಆರೋಪಿಯ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *