Breaking News

ಖಾಸಗಿ ಬಸ್ ಪಾರ್ಕಿಂಗ್ ಲಾಟ್‌ನಲ್ಲಿ ಭೀಕರ ಬೆಂಕಿ – 4 ಬಸ್‌ಗಳು ಭಸ್ಮ!

ಬೆಂಗಳೂರು ನಗರದ ಹೊರವಲಯದ ಆನೇಕಲ್ ತಾಲ್ಲೂಕಿನ ಹಳೆ ಚಂದಾಪುರ ಸಮೀಪದ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ಕು ಬಸ್‌ಗಳು ಬೆಂಕಿಗಾಹುತಿಯಾಗಿವೆ. ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಎಂಪೈರ್ ಟ್ರಾವೆಲ್ಸ್‌ಗೆ ಸೇರಿದ ಬಸ್‌ನ ಹಿಂಬದಿ ಟೈರ್ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಪಕ್ಕದ ಬಸ್‌ಗಳಿಗೂ ವ್ಯಾಪಿಸಿದೆ. ಸ್ಥಳದಲ್ಲಿದ್ದ ಚಾಲಕರು ಮತ್ತು ಸಿಬ್ಬಂದಿ ನೀರು ಎರಚಿ ಬೆಂಕಿ ನಂದಿಸಲು ಯತ್ನಿಸಿದರೂ ಯಶಸ್ವಿಯಾಗಲಿಲ್ಲ. ಕೂಡಲೇ ಬಸ್‌ಗಳಲ್ಲಿ ಮಲಗಿದ್ದ ಚಾಲಕರು ಹಾಗೂ ಕ್ಲೀನರ್‌ಗಳನ್ನು ಸುರಕ್ಷಿತವಾಗಿ ಹೊರತೆಗೆದು, ಆರು ಬಸ್‌ಗಳನ್ನು ಸ್ಥಳದಿಂದ ತೆರವುಗೊಳಿಸಲಾಯಿತು. ಆದರೆ ಕೆಲವು ಬಸ್‌ಗಳನ್ನು ತಾಂತ್ರಿಕ ಕಾರಣಗಳಿಂದ ಸ್ಥಳಾಂತರಿಸಲು ಸಾಧ್ಯವಾಗದೆ, ಒಟ್ಟು ನಾಲ್ಕು ಬಸ್‌ಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ದಳದ ಸಿಬ್ಬಂದಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *