ಬೆಂಗಳೂರು ನಗರದ ಚೌಡೇಶ್ವರಿ ನಗರದಲ್ಲಿ ನಡೆದ ಭೀಕರ ರೋಡ್ ರೇಜ್ ಘಟನೆಯಲ್ಲಿ, ಮದ್ಯದ ಅಮಲಿನಲ್ಲಿದ್ದ ಕ್ಯಾಬ್ ಚಾಲಕ ಅನಂತ್ ಎಂಬಾತ ವಾಹನ ಸವಾರ ಮಂಜುನಾಥ್ ಅವರನ್ನು ಕಾರಿನ ಬಾನೆಟ್ ಮೇಲೆ ಸುಮಾರು ಒಂದು ಕಿಲೋಮೀಟರ್ ದೂರ ಎಳೆದೊಯ್ದಿದ್ದಾನೆ. ಅತಿವೇಗದ ಚಾಲನೆ ಪ್ರಶ್ನಿಸಿದ್ದಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದು, ಮಂಜುನಾಥ್ ಅವರು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ ಬಳಿಕ ಆಕ್ರೋಶಗೊಂಡ ಚಾಲಕ ಕಾರು ಚಲಾಯಿಸಿದ್ದಾನೆ. ಘಟನೆಯಲ್ಲಿ ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯನ್ನು ಕಂಡ ಸ್ಥಳೀಯರು ಕಾರನ್ನು ಬೆನ್ನಟ್ಟಿ ತಡೆದರೂ, ಪೊಲೀಸರು ಬರುವ ಮುನ್ನವೇ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಚೌಡೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಚಾಲಕನಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಇದೇ ವೇಳೆ, ಇತ್ತೀಚೆಗೆ ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ ವೇಯಲ್ಲೂ ಮತ್ತೊಂದು ರೋಡ್ ರೇಜ್ ಪ್ರಕರಣ ನಡೆದಿತ್ತು. ಡಿಕ್ಕಿ ವಿಚಾರವಾಗಿ ಆರಂಭವಾದ ವಾಗ್ವಾದ ಬಳಿಕ ಬೆಂಗಳೂರಿನ ಕುಟುಂಬದ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಶಂಕಿತರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

