ತುಮಕೂರು: ಜಿಲ್ಲೆಯ ಬೆಳಗುಂಬ ಸಮೀಪ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ರೌಡಿಶೀಟರ್ ಮಲ್ಲ ಅಲಿಯಾಸ್ ವೀರಣ್ಣ (38) ಅವರನ್ನು ದುಷ್ಕರ್ಮಿಗಳ ತಂಡ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದೆ. ಇಂದು ರಾತ್ರಿ ಸುಮಾರು 8:30ರ ವೇಳೆಗೆ ಗರುಡ ಕೆಫೆ ಮುಂಭಾಗ ಬೈಕ್‌ನಲ್ಲಿ ತೆರಳುತ್ತಿದ್ದ ಮಲ್ಲನಿಗೆ ಸ್ವಿಫ್ಟ್ ಕಾರಿನಲ್ಲಿ ಬಂದ ನಾಲ್ಕೈದು ಮಂದಿ ಡಿಕ್ಕಿ ಹೊಡೆದು, ಬಳಿಕ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದು ಪರಾರಿಯಾಗಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತುಮಕೂರು ಎಸ್‌ಪಿ ಅಶೋಕ್ ಕೂಡ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದರು. ಮಲ್ಲ ತುಮಕೂರು ಗ್ರಾಮಾಂತರ ಠಾಣೆಯ ರೌಡಿಶೀಟರ್ ಆಗಿದ್ದು, 2008ರ ಗಡ್ಡರಾಜು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದನು. ಈ ಹತ್ಯೆಯ ಹಿಂದಿನ ಕಾರಣ ಹಾಗೂ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

