Breaking News

ಎಂ.ಡಿ.ಎಂ.ಎ. ವಶ: ಯುವಕನ ಬಂಧನ

ಕಾಸರಗೋಡು: ಉಪ್ಪಳ ಜೋಡುಕಲ್ಲಿನಲ್ಲಿ ಇತ್ತೀಚೆಗೆ ನಡೆದ ದಾಳಿಯಲ್ಲಿ 112 ಗ್ರಾಂ ಎಂ.ಡಿ.ಎಂ.ಎ. (MDMA) ಮಾದಕ ವಸ್ತುವನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂರನೇ ಆರೋಪಿ ಅಬ್ದುಲ್ ಸಮದ್ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಮೊಯ್ದೀನ್ ಕುಂಞಿ ಮತ್ತು ಫಾರೂಕ್ ಮುಹಮ್ಮದ್ ಎಂಬಿಬ್ಬರನ್ನು ಬಂಧಿಸಲಾಗಿತ್ತು. ಕರ್ನಾಟಕದಿಂದ ಕಾರಿನಲ್ಲಿ ಮಾದಕ ವಸ್ತು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಪ್ರತ್ಯೇಕ ಸ್ಕ್ವಾಡ್‌ನ ಎಸ್.ಐ. ಉಮೇಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಕಾರನ್ನು ತಡೆದು ತಪಾಸಣೆ ನಡೆಸಲಾಗಿತ್ತು. ವಶಪಡಿಸಿಕೊಂಡ ಎಂ.ಡಿ.ಎಂ.ಎ. ಮೌಲ್ಯ ಲಕ್ಷಾಂತರ ರೂಪಾಯಿ ಎಂದು ಅಂದಾಜಿಸಲಾಗಿದೆ. ಬಂಧಿತ ಆರೋಪಿಯಿಂದ ಮೊಬೈಲ್ ಫೋನ್ ಹಾಗೂ ಹಲವು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *